ಪಾಕ್ ನೂತನ ಪ್ರಧಾನಿ ಶಹಬಾಝ್ ಷರೀಫ್’ಗೆ ನರೇಂದ್ರ ಮೋದಿ ಅಭಿನಂದನೆ

Prasthutha|

ದೆಹಲಿ: ನೂತನವಾಗಿ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಗೊಂಡ ಶಹಬಾಝ್ ಷರೀಫ್’ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ‘ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ’ ಎಂದು ಟ್ವೀಟ್ ಮೂಲಕ ಮೋದಿ ಸಂದೇಶ ರವಾನಿಸಿದ್ದಾರೆ.

- Advertisement -


ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ “ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಮಿಯಾನ್ ಮುಹಮ್ಮದ್ ಶಹಬಾಜ್ ಶರೀಫ್ ಅವರಿಗೆ ಅಭಿನಂದನೆಗಳು. ಭಯೋತ್ಪಾದನೆಯಿಂದ ಮುಕ್ತವಾದ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಭಾರತ ಬಯಸುತ್ತದೆ, ಇದರಿಂದ ನಾವು ನಮ್ಮ ಅಭಿವೃದ್ಧಿಯ ಸವಾಲುಗಳ ಮೇಲೆ ಗಮನ ಹರಿಸಬಹುದು ಮತ್ತು ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಬರೆದಿದ್ದಾರೆ.


ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಗೆಲುವಾದ ನಂತರ ಸರ್ಕಾರ ಪತನಗೊಂಡು ಇಮ್ರಾನ್ ರನ್ನು ಪದಚ್ಯುತಗೊಳಿಸಲಾಗಿತ್ತು. ನಂತರ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ ಶಹಬಾಝ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

Join Whatsapp