ಹಾಸನ: ನನ್ನ ಅಳಿಯ ಎಂಬ ಕಾರಣಕ್ಕೆ ಡಾ. ಸಿಎನ್ ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮೋದಿಯವರು ಆ ಅಣ್ಣ ತಮ್ಮರ (ಡಿಕೆ ಸಹೋದರರ) ದೌರ್ಜನ್ಯ ಏನಿದೆ, ಅದನ್ನು ನಿಲ್ಲಿಸಲೇಬೇಕು ಎಂದು ಮಂಜುನಾಥ್ರನ್ನು ಕಣಕ್ಕಿಳಿಸಿದ್ದಾರೆ. ಅರ್ಥ ಮಾಡಿಕೊಳ್ಳಿ’ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚಿಗನಹಳ್ಳಿ ಗ್ರಾಮದಲ್ಲಿ ಪ್ರಜ್ವಲ್ ಪರ ಮತಯಾಚನೆ ಮಾಡಿದ ಅವರು, ಡಿಕೆ ಸಹೋದರರ ವಿರುದ್ಧವೂ ವಾಗ್ದಾಳಿ ನಡೆಸಿದರು.
ಜಯದೇವ ಸಂಸ್ಥೆಯನ್ನು ಇಡೀ ದೇಶದಲ್ಲಿ ಎತ್ತರಕ್ಕೆ ಬೆಳೆಸಿದ ಕೀರ್ತಿ ಅವರದ್ದಾಗಿದೆ. ಅವರು ನಮ್ಮ ಪಕ್ಷದಿಂದಲೇ ಸ್ಪರ್ಧಿಸಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.