ನವದೆಹಲಿ: ವಕ್ಫ್ ಮಂಡಳಿಯ ಅಧಿಕಾರ ಮತ್ತು ಅದರ ಕಾರ್ಯಚಟುವಟಿಕೆಗೆ ತಿದ್ದುಪಡಿ ತರಲು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಸೂದೆಯನ್ನು ತರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಸಂಸದ ಅಸಾದುದ್ದೀನ್ ಒವೈಸಿ ಕಿಡಿಗಾರಿದ್ದಾರೆ. ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಯಾವಾಗಲೂ ವಕ್ಫ್ ಬೋರ್ಡ್ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ ಎಂದು ಹೇಳಿರುವ ಓವೈಸಿ, ಬಿಜೆಪಿ ವಕ್ಫ್ ಬೋರ್ಡ್ ಅನ್ನು ರದ್ದುಪಡಿಸಲು ಬಯಸುತ್ತದೆ. ಕೇಂದ್ರ ಸರ್ಕಾರವೇ ಈ ಮಸೂದೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದೆ. ಸರ್ಕಾರ ಮೊದಲು ಈ ಮಾಹಿತಿಯನ್ನು ಸಂಸತ್ತಿಗೆ ನೀಡಬೇಕು. ಬಿಜೆಪಿ ವಕ್ಫ್ ಮಂಡಳಿಗೆ ಸೇವೆ ಸಲ್ಲಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ನಮ್ಮ ದೇಶದಲ್ಲಿ 1995ರ ವಕ್ಫ್ ಕಾಯ್ದೆ ಇದ್ದು, 2013ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದರ ಅಡಿಯಲ್ಲಿ ವಕ್ಫ್ ಆಸ್ತಿ ನಿರ್ವಹಣೆ ಮಾಡಲಾಗುತ್ತಿದೆ.