Home ಟಾಪ್ ಸುದ್ದಿಗಳು ಮೋದಿ ಸರಕಾರ ಬಡವರ ಹೊಟ್ಟೆಗೆ ಕಲ್ಲು ಹಾಕುತ್ತಿದೆ: SDPI

ಮೋದಿ ಸರಕಾರ ಬಡವರ ಹೊಟ್ಟೆಗೆ ಕಲ್ಲು ಹಾಕುತ್ತಿದೆ: SDPI

ಬೆಂಗಳೂರು: ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ಬದುಕಿನ ಮೇಲೆ ಪ್ರಹಾರ ನಡೆಸಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಟೀಕಿಸಿದ್ದಾರೆ.

ಕೇಂದ್ರದ ತೆರಿಗೆ ನೀತಿ ಬಡವರ ತಿನ್ನುವ ಅನ್ನಕ್ಕೂ ಕಲ್ಲು ಹಾಕಿದೆ. ಈಗಾಗಲೇ ಪೆಟ್ರೋಲ್, ಡೀಸೆಲ್, ಆಹಾರ ಪದಾರ್ಥಗಳ ಬೆಲೆ ಹೆಚ್ಚಳದಿಂದ ಕಂಗೆಟ್ಟಿರುವ ಮಧ್ಯಮ ವರ್ಗ ಮತ್ತು ಬಡವರ ಬದುಕು GST ಹೆಚ್ಚಳದಿಂದ ಮತ್ತಷ್ಟು ದುರ್ಬರವಾಗಲಿದೆ. ಕಳೆದ ಬಾರಿ ಜಿ.ಎಸ್.ಟಿ ಯನ್ನು ಜಾರಿಗೆ ತರುವ ವೇಳೆ ಪ್ರಧಾನಿ ಮೋದಿಯವರು “ಈ ಹಿಂದಿನ ಸರಕಾರಗಳು ಅಕ್ಕಿ ಮತ್ತು ಹಾಲಿಗೂ ತೆರಿಗೆ ಪಡೆಯುತ್ತಿತ್ತು. ನನ್ನ ಸರಕಾರ ಯಾವುದೇ ಕಾರಣಕ್ಕೂ ಅಕ್ಕಿ ಮತ್ತು ಹಾಲಿಗೆ GST ಪಡೆಯುವುದಿಲ್ಲ ಎಂದಿದ್ದರು. ಇದೀಗ ಮೋದಿ ಎಂದಿನಂತೆ ಮಾತು ತಪ್ಪಿದ್ದು ಹಗಲು ದರೋಡೆಗಿಳಿದಿದೆ, ಕ್ರೂರ ಸರ್ಕಾರದಿಂದ ಮಾತ್ರ ಇಂತಹ ತೀರ್ಮಾನ ಕೈಗೊಳ್ಳಲು ಸಾಧ್ಯ ಎಂದು ಅವರು ಟೀಕಿಸಿದ್ದಾರೆ.

ಕಾರ್ಪೊರೇಟ್ ಕಂಪನಿಗಳು ಮತ್ತು ಶ್ರೀಮಂತ ಉದ್ಯಮಿಗಳಿಗೆ ತೆರಿಗೆ ವಿನಾಯಿತಿ ನೀಡಿ ಅವರಿಗೆ ಕೆಂಪುಹಾಸು ಹಾಕುವ ಸರ್ಕಾರಕ್ಕೆ ಬಡವರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದಿರುವುದು ಸಾಬೀತಾಗಿದೆ. ಅಚ್ಚೇ ದಿನ್ ಹೆಸರಿನಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಜನರ ರಕ್ತವನ್ನು ಹೀರಿ ಅವರ ಬದುಕನ್ನು ಕಸಿಯುತ್ತಿದೆ. ಜನಸಾಮಾನ್ಯರು ಕೇಂದ್ರದ ಈ ಜನವಿರೋಧಿ ಮತ್ತು ದುಷ್ಟ ನೀತಿಯನ್ನು ಅರಿತು ಈಗಲೇ ಈ ಬಗ್ಗೆ ಧ್ವನಿ ಎತ್ತಬೇಕು. ಇಲ್ಲದಿದ್ದರೆ ಭಾರತ ಮತ್ತೊಂದು ಶ್ರೀಲಂಕಾ ಆಗುವುದರಲ್ಲಿ ಸಂಶಯವಿಲ್ಲ. ಹಾಗಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೋದಿ ಸರಕಾರ ಕೂಡಲೇ ದಿನಬಳಕೆ ಆಹಾರ ವಸ್ತುಗಳ ಮೇಲೆ ಹಾಕಿರುವ GST ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಸರಕಾರದ ಜನವಿರೋಧಿ ಆದೇಶಗಳನ್ನು ಜನರೊಂದಿಗೆ ಸೇರಿ ವಿರೋಧಿಸಲಿದ್ದೇವೆ ಎಂಬ ಸ್ಪಷ್ಟ ಸಂದೇಶವನ್ನು ನೀಡಲಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ತಿಳಿಸಿದ್ದಾರೆ.

Join Whatsapp
Exit mobile version