Home ಟಾಪ್ ಸುದ್ದಿಗಳು ಮೋದಿ ಸರ್ಕಾರ ದೇಶದ್ರೋಹವೆಸಗಿದೆ: ಪೆಗಾಸೆಸ್ ಕುರಿತು ‘ನ್ಯೂಯಾರ್ಕ್ ಟೈಮ್ಸ್’ ವರದಿ ಉಲ್ಲೇಖಿಸಿ ರಾಹುಲ್ ಗಾಂಧಿ ವಾಗ್ದಾಳಿ

ಮೋದಿ ಸರ್ಕಾರ ದೇಶದ್ರೋಹವೆಸಗಿದೆ: ಪೆಗಾಸೆಸ್ ಕುರಿತು ‘ನ್ಯೂಯಾರ್ಕ್ ಟೈಮ್ಸ್’ ವರದಿ ಉಲ್ಲೇಖಿಸಿ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಇಸ್ರೇಲ್ ಜೊತೆಗಿನ ಒಪ್ಪಂದದ ಭಾಗವಾಗಿ 2017 ರಲ್ಲಿ ಮೋದಿ ಸರ್ಕಾರ ಪೆಗಾಸೆಸ್ ಸ್ಪೈವೇರ್ ಖರೀದಿಸಿರುವ ಕುರಿತು ನ್ಯೂಯಾರ್ಕ್ ಟೈಮ್ ವರದಿಯ ಬಗ್ಗೆ ಕಾಂಗ್ರೆಸ್ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೋದಿ ಸರ್ಕಾರ ದೇಶದ್ರೋಹ ಕ್ರತ್ಯವೆಸಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು ಸರ್ಕಾರ ಸ್ಪೈವೇರ್ ಅನ್ನು ಬಳಸಿಕೊಂಡು ಅಕ್ರಮವಾಗಿ ದೇಶದ ಗಣ್ಯರ ಪೋನ್ ಗಳನ್ನು ಕದ್ದಾಲಿಕೆ ನಡೆಸಿ ದೇಶದ್ರೋಹವೆಸಗಿದೆ ಎಂದು ಆರೋಪಿಸಿದ್ದಾರೆ. ಇಸ್ರೇಲ್ ಮೂಲದ ಪೆಗಾಸೆಸ್ ಸ್ಪೈವೇರ್ ಮತ್ತು ಕ್ಷಿಪಣಿ ವ್ಯವಸ್ಥೆಯು 2017 ರಲ್ಲಿ ಭಾರತ ಮತ್ತು ಇಸ್ರೇಲ್ ನಡುವೆ ಸುಮಾರು ಎರಡು ಬಿಲಿಯನ್ ಡಾಲರ್ ಪಾವತಿಸಿ ಅತ್ಯಾಧುನಿಕ ಶಸ್ತ್ರಾಸ್ತ್ರ ಮತ್ತು ಗುಪ್ತಚರ ಸಾಧನಗಳ ಒಪ್ಪಂದ ಮಾಡಲಾಗಿತ್ತು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಸರ್ಕಾರಿ ಸಂಸ್ಥೆ, ರಾಜಕಾರಣಿ ಮತ್ತು ಸಾರ್ವಜನಿಕರ ಮೇಲೆ ಕಣ್ಗಾವಲು ನಡೆಸಲು ಮೋದಿ ಸರ್ಕಾರ ಪೆಗಾಸೆಸ್ ಅನ್ನು ಖರೀದಿಸಿತ್ತು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, ಮೋದಿ ಸರ್ಕಾರ ಭಾರತದ ನಾಗರಿಕರನ್ನು ಶತ್ರುಗಳಂತೆ ನಡೆಸುತ್ತಿದ್ದು, ತನ್ನದೇ ನಾಗರಿಕರ ವಿರುದ್ಧ ಅಸ್ತ್ರವಾಗಿ ಬಳಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಭಾರತದಲ್ಲಿ ಉದ್ದೇಶಿತ ಕಣ್ಗಾವಲಿಗಾಗಿ ಪೆಗಾಸಸ್‌ನ ಬಳಕೆಯ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೂರು ಸದಸ್ಯರ ಸ್ವತಂತ್ರ ತಜ್ಞರ ಸಮಿತಿಯನ್ನು ರಚಿಸಿತ್ತು. ಈ ಮಧ್ಯೆ ತನ್ನ ವಿರುದ್ಧ ಕಾಂಗ್ರೆಸ್ ಮಾಡಿರುವ ಎಲ್ಲಾ ಆರೋಪಗಳನ್ನು ಮೋದಿ ಸರ್ಕಾರ ನಿರಾಕರಿಸಿದೆ.

Join Whatsapp
Exit mobile version