2014ರ ನಂತರ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಮೋದಿ ಸರ್ಕಾರ ಭರ್ತಿ ಮಾಡುತ್ತಿಲ್ಲ: ಖರ್ಗೆ

Prasthutha|

ನವದೆಹಲಿ: 2014ರ ನಂತರ ಖಾಲಿ ಇರುವ ವಿವಿಧ ಇಲಾಖೆಗಳ 30 ಲಕ್ಷ ಹುದ್ದೆಗಳಿಗೆ ಬಿಜೆಪಿ ಸರ್ಕಾರ ಭರ್ತಿ ಮಾಡದೆ, ಯುವಕರ ಕಣ್ಣಿಗೆ ಮಣ್ಣೆರೆಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೋದಿ ಸರ್ಕಾರವು ‘ದಲಿತ, ಬುಡಕಟ್ಟು ವಿರೋಧಿ, ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ ವಿರೋಧಿ, ಅದಕ್ಕಾಗಿಯೇ ಮೋದಿ ಈ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ಆರೋಪಿಸಿದರು.

2014ರಿಂದ 2022 ರವರೆಗಿನ ಅವಧಿಯಲ್ಲಿ ಖಾಲಿ ಹುದ್ದೆಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಖರ್ಗೆ ಆರೋಪಿಸಿದ್ದಾರೆ.