ಮೋದಿ ‘ಸುಳ್ಳುಗಾರರ ನಾಯಕ’: ಮಲ್ಲಿಕಾರ್ಜುನ ಖರ್ಗೆ

Prasthutha|

ಜೈಪುರ: ಪ್ರಧಾನಿ ಮೋದಿ ಅವರನ್ನು ‘ಸುಳ್ಳುಗಾರರ ನಾಯಕ’ ಎಂದು ಹೇಳಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಪ್ರಧಾನಿ ಮೋದಿ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

- Advertisement -


‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ನಾವು ಭರವಸೆ ನೀಡಿದ್ದೇವೆ. ನಾವು ಪ್ರಧಾನಿ ಮೋದಿಯಂತೆ ಸುಳ್ಳು ಹೇಳುವುದಿಲ್ಲ. ಅವರು ಜನರಿಗೆ ಹಲವಾರು ಭರವಸೆಗಳನ್ನುನೀಡಿದ್ದರು. ಆದರೆ ಯಾವ ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.



Join Whatsapp