ಕಾರ್ಪೊರೇಟ್ ಗಳ ಸಾಲ ಮನ್ನಾ ಮಾಡುವ ಮೋದಿ ರೈತರ ಸಾಲ ಮನ್ನಾ ಮಾಡುತ್ತಿಲ್ಲ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ರೂ. ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ರೂ. ಆಗಿದೆ. ಪ್ರಧಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ರೂ. ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.

- Advertisement -

ವಿಧಾನ ಪರಿಷತ್ ನಲ್ಲಿ 2023-24ನೇ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿ, “ಶ್ರಮಿಕರ, ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೊರೇಟ್ ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ. ಈ ಕಾರಣಕ್ಕೆ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ. ಶ್ರೀಮಂತ ಕಾರ್ಪೊರೇಟ್ ಗಳ 12 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದಾರೆ. ಆದರೆ, ರೈತರ ಸಾಲ ಮನ್ನಾ ಮಾಡಿ ಎಂದರೆ ಒಪ್ಪುತ್ತಿಲ್ಲ” ಎಂದರು.

“ಬೆಂಕಿ ಹಚ್ಚುವುದು ಬಿಜೆಪಿ ಕೆಲಸ. ಅವರು ಮಣಿಪುರವನ್ಮೂ ಬಿಡಲ್ಲ, ಕರ್ನಾಟಕವನ್ನೂ ಬಿಡಲ್ಲ. ಬೆಂಕಿ ಹಚ್ಚುತ್ತಾರೆ. ಮಹಾತ್ಮಾ ಗಾಂಧಿ ಅವರ ಜೀವನ ಸಂದೇಶವೇ ಸತ್ಯ-ಅಹಿಂಸೆ ಆಗಿತ್ತು. ಸದಾ ಸುಳ್ಳು ಹೇಳುವ ಬಿಜೆಪಿಯವರು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಕುಳಿತಿದ್ದಾರೆ” ಎಂದು ಲೇವಡಿ ಮಾಡಿದರು.

Join Whatsapp