ಮೋದಿ ನೇತೃತ್ವದಲ್ಲಿ NDA ಸಭೆ ಆರಂಭ: ಚಂದ್ರಬಾಬು ನಾಯ್ಡು-ನಿತೀಶ್ ಭಾಗಿ

Prasthutha|


ನವದೆಹಲಿ: ಇಂಡಿಯಾ ಒಕ್ಕೂಟ ಪ್ರಬಲ ಪೈಪೋಟಿ ನೀಡಿದ ಕಾರಣ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಎನ್‌ಡಿಎ ಕೂಟದ ಪಕ್ಷಗಳ ಮಹತ್ವದ ಸಭೆ ಶುರುವಾಗಿದೆ. ಸಭೆ ಆರಂಭಗೊಂಡಿದ್ದು, ಸರ್ಕಾರ ರಚನೆಯ ಕಿಂಗ್ ಮೇಕರ್ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಭಾಗಿಯಾಗಿದ್ದಾರೆ.

- Advertisement -

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಮಿತ್ ಶಾ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಟಿಡಿಪಿ ಚಂದ್ರಬಾಬು ನಾಯ್ಡು ಸೇರಿದಂತೆ ಎನ್‌ಡಿಎ ಮೈತ್ರಿ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ರಾಜ್ಯದಿಂದ ಹೆಚ್‌ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದಾರೆ.



Join Whatsapp