ಯಾದಗಿರಿ: ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ಮೊದಲು ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ ಮೀಸಲಾತಿ ತೆಗೆದು ಹಾಕುತ್ತೇವೆ. ಅದನ್ನು ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ಜನಾಂಗದವರಿಗೆ ಹಂಚಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ ಮತದಾನ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.