ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸದನದೊಳಗೆ ಮಾತನಾಡಬೇಕಿತ್ತು. ಅದರ ಬದಲು ಇಬ್ಬರೂ ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ಸಂಸತ್ತಿಗೆ ಮಾಡಿದ ಅವಮಾನ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಹೇಳಿದ್ದಾರೆ.
ಭದ್ರತಾ ಲೋಪ ಘಟನೆ ಕುರಿತು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡುವ ಬದಲು, ನೀವಿಬ್ಬರೂ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದೀರಿ. ಇದು ಸಂಸತ್ತಿಗೆ ಮಾಡಿದ ಅವಮಾನ ಎಂದು ಕಪಿಲ್ ಸಿಬಲ್ Xನಲ್ಲಿ ಪೋಸ್ಟ್ ಮಾಡಿದ್ದಾರೆ.
ಡಿಸೆಂಬರ್ 13 ರ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಪಕ್ಷಗಳ ಸಂಸದರನ್ನು ಲೋಕಸಭೆಯಿಂದ ಮತ್ತು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.