ನವದೆಹಲಿ: ದಕ್ಷಿಣ ಆಫ್ರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಾದ ಬೆನ್ನಲ್ಲೆ ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸುವಂತೆ ಪ್ರಧಾನಿ ಮೋದಿ ಶನಿವಾರ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಕಾಲ ಸಭೆ ನಡೆಸಿದ ಮೋದಿ, ದೇಶದ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಪರೀಕ್ಷೆ ಮಾಡಬೇಕು. ಹಾಗೇ, ಈ ಕುರಿತು ಹೊರಡಿಸಲಾಗಿರುವ ಮಾರ್ಗಸೂಚಿಗಳ ಅಗತ್ಯವನ್ನು ಮರು ಪರಿಶೀಲಿಸಬೇಕು ಎಂದಿದ್ದಾರೆ.
ಒಮಿಕ್ರಾನ್ ಸೋಂಕಿನ ಆರ್ಭಟ ಹೆಚ್ಚಾದ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲಿನ ನಿರ್ಬಂಧಗಳನ್ನು ಬಿಗಿಗೊಳಿಸಲು ಮೋದಿ ಘೋಷಿಸಿದ್ದಾರೆ.