ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧಕ್ಕೆ ಮೋದಿ ಸೂಚನೆ !

Prasthutha|

ನವದೆಹಲಿ: ದಕ್ಷಿಣ ಆಫ್ರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಾದ ಬೆನ್ನಲ್ಲೆ ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸುವಂತೆ ಪ್ರಧಾನಿ ಮೋದಿ ಶನಿವಾರ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

- Advertisement -

ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಕಾಲ ಸಭೆ ನಡೆಸಿದ ಮೋದಿ, ದೇಶದ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಪರೀಕ್ಷೆ ಮಾಡಬೇಕು. ಹಾಗೇ, ಈ ಕುರಿತು ಹೊರಡಿಸಲಾಗಿರುವ ಮಾರ್ಗಸೂಚಿಗಳ ಅಗತ್ಯವನ್ನು ಮರು ಪರಿಶೀಲಿಸಬೇಕು ಎಂದಿದ್ದಾರೆ.

ಒಮಿಕ್ರಾನ್ ಸೋಂಕಿನ ಆರ್ಭಟ ಹೆಚ್ಚಾದ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲಿನ ನಿರ್ಬಂಧಗಳನ್ನು ಬಿಗಿಗೊಳಿಸಲು  ಮೋದಿ ಘೋಷಿಸಿದ್ದಾರೆ.

Join Whatsapp