ಪಾಟ್ನಾ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 12ರಂದು ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಹಾರದ ನ್ಯಾಯಾಲಯವೊಂದು ಸಮನ್ಸ್ ಜಾರಿ ಮಾಡಿದೆ.
ಬಿಜೆಪಿ ನಾಯಕ, ಬಿಹಾರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಬಿಹಾರ ನ್ಯಾಯಾಲಯವೊಂದರಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈಗಾಗಲೇ 2019ರ ಮೋದಿ ಉಪನಾಮ ಪ್ರಕರಣದ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾಗಿ, 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಇದೀಗ ಮೋದಿ ಉಪನಾಮಕ್ಕೆ ಮಾಡಿದ ಅವಹೇಳನದ ವಿಚಾರವಾಗಿಯೇ ಸುಶೀಲ್ ಮೋದಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.