Home ಟಾಪ್ ಸುದ್ದಿಗಳು ಇಂದು ಮೋದಿ ಮೈಸೂರಿಗೆ: ಪ್ರಧಾನಿ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಸಜ್ಜು

ಇಂದು ಮೋದಿ ಮೈಸೂರಿಗೆ: ಪ್ರಧಾನಿ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಸಜ್ಜು

ಮೈಸೂರು : ಎರಡು ದಿನಗಳ ಭೇಟಿಗಾಗಿ ಇಂದು ಸಂಜೆ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅವರ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಸಂಪೂರ್ಣ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ ಜೂ.21 ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ.

ಮೋದಿ ಅವರನ್ನು ಅದ್ಧೂರಿ ಸ್ವಾಗತ ಮಾಡಲು ಜಿಲ್ಲಾಡಳಿತ ಸಜ್ಜಾಗಿದ್ದು ವಿಮಾನ ನಿಲ್ದಾಣದಿಂದ ಅರಮನೆ, ಅರಮನೆಯ ಸುತ್ತಮುತ್ತಲಿನ ರಸ್ತೆಗಳು, ಸುತ್ತೂರು ಶಾಖಾ ಮಠ, ಚಾಮುಂಡಿಬೆಟ್ಟಕ್ಕೆ ಹೋಗುವ ರಸ್ತೆಗಳು, ಅರಮನೆಯಿಂದ ಚಾಮರಾಜ ಜೋಡಿ ರಸ್ತೆ. ರಾಮಸ್ವಾಮಿ ವೃತ್ತ, ಎಂಡಿಎ ವೃತ್ತದ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಹೋಗುವ ರಸ್ತೆಗಳನ್ನು ಹೊಸದಾಗಿ ಡಾಂಬರೀಕರಣ ಮಾಡಲಾಗಿದೆ. ವೃತ್ತಗಳನ್ನು ಸಿಂಗರಿಸಲಾಗಿದೆ. ವಿದ್ಯುತ್‌ ದೀಪಗಳನ್ನು ಅಳವಡಿಸಲಾಗಿದೆ.

ಮೋದಿ ಅವರದು ಇದು ಪ್ರಧಾನಿಯಾಗಿ ಮೂರನೇ ಭೇಟಿ. ಇದಲ್ಲದೇ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗಲೂ ಮೂರು ಬಾರಿ ಅವರು ಮೈಸೂರಿಗೆ ಭೇಟಿ ನೀಡಿದ್ದಾರೆ.

Join Whatsapp
Exit mobile version