ಸತತ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ

Prasthutha|

ನವದೆಹಲಿ: ಸತತ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಪ್ರಕಾರ 543 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 293 ಸ್ಥಾನಗಳನ್ನು ಪಡೆದು ಗೆಲ್ಲುವ ಮೂಲಕ ಬಹುಮತದ ಗಡಿ ದಾಟಿ ಬಿಜೆಪಿ ಸರ್ಕಾರ ರಚಿಸಿದೆ.

- Advertisement -

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾಗಿದೆ.

ಫಲಿತಾಂಶ ಪ್ರಕಟವಾದ ಬಳಿಕ 5 ದಿನಗಳ ನಂತರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.2019ರಲ್ಲಿ ಫಲಿತಾಂಶದ 7 ದಿನಗಳ ನಂತರ ಪ್ರಧಾನಿ ಹುದ್ದೆಗೆ ಪ್ರಮಾಣವಚನ ಸಮಾರಂಭವನ್ನು ನಡೆಸಲಾಯಿತು. 2014ರಲ್ಲಿ ಎನ್‌ಡಿಎ ಸರ್ಕಾರ ರಚನೆಯಾದಾಗ ಮೋದಿ 10 ದಿನಗಳ ನಂತರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಇಂದು ರಾಜನಾಥ್ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್‌, ಮನೋಹರಲಾಲ್ ಖಟ್ಟರ್‌ ಮುಂತಾದವರು ಪ್ರಮಾಣ ಸ್ವೀಕರಿಸಿದ್ದಾರೆ. ಕರ್ನಾಟಕದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಂತ್ರಿ ಮಂಡಲದ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಇತರರು ಸೇರಿದಂತೆ ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ಹಲವಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

Join Whatsapp
Exit mobile version