Home ಟಾಪ್ ಸುದ್ದಿಗಳು ಇಂದು ಸಂಜೆ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ

ಇಂದು ಸಂಜೆ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ

ನವದೆಹಲಿ: ಇಂದು ಸಾಯಂಕಾಲ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆವದೆಹಲಿ: ಎನ್‌ಡಿಎ ಶಾಸಕಾಂಗ ನಾಯಕನಾಗಿ ಅವಿರೋಧವಾಗಿ ಆಯ್ಕೆಗೊಂಡ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಇಂದು ಸಾಯಂಕಾಲ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಗುರುವಾರ ಎನ್‌ಡಿಎ ಸಭೆಯ ಬಳಿಕ ಶುಕ್ರವಾರ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಬಿಜೆಪಿಯ 243 ಸದಸ್ಯರು ಸೇರಿದಂತೆ ಎನ್‌ಡಿಎ ಎಲ್ಲ ಅಂಗ ಪಕ್ಷಗಳ ಬೆಂಬಲ ಪತ್ರದೊಂದಿಗೆ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದನೆ ಮಾಡಿದ್ದರು. ಪ್ರಮಾಣ ವಚನ ಸಮಾರಂಭದ ಮುನ್ನಾ ದಿನವಾದ ಶನಿವಾರ ತಮ್ಮ ಮಂತ್ರಿ ಮಂಡಲಕ್ಕೆ ಸಚಿವರಾಗಿ ಸೇರಲಿರುವ ಸದಸ್ಯರ ಹೆಸರುಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಿದ್ದಾರೆಂದು ಮೂಲಗಳು ತಿಳಿಸಿವೆ.

ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿಶೇಷ ಅತಿಥಿಗಳ ಆಗಮನ ಪ್ರಾರಂಭವಾಗಿದ್ದು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶನಿವಾರ ರಾಷ್ಟ್ರ ರಾಜಧಾನಿಗೆ ಬಂದಿಳಿದಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮೋದಿ ಸಂಪುಟದಲ್ಲಿ ನಮ್ಮ ರಾಜ್ಯದಿಂದ ಸಚಿರಾಗುವ ಅವಕಾಶ ಯಾರಿಗೆ ದೊರಕಬಹುದು ಅನ್ನೋದು ಸದ್ಯದ ಮಟ್ಟಿಗೆ ಬಹು ಚರ್ಚಿತ ವಿಷಯವಾಗಿದೆ. ಲೋಕಸಭೆ ಚುನಾವಣೆ ಪೂರ್ವದಲ್ಲೇ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರ ಪ್ರತಿಫಲವೆಂಬಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಮಂಡ್ಯ ಸಂಸದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗೋದು ಪಕ್ಕಾ ಎಂದು ಹೇಳಲಾಗಿದೆ.

Join Whatsapp
Exit mobile version