Home ಟಾಪ್ ಸುದ್ದಿಗಳು ಮೋದಿ ಟಿಕೆಟ್ ಕೊಡಲ್ಲ; ರಾಜಕೀಯ ನಿವೃತ್ತಿ ಘೋಷಿಸಿದ ಬಿ.ಎನ್ ಬಚ್ಚೇಗೌಡ

ಮೋದಿ ಟಿಕೆಟ್ ಕೊಡಲ್ಲ; ರಾಜಕೀಯ ನಿವೃತ್ತಿ ಘೋಷಿಸಿದ ಬಿ.ಎನ್ ಬಚ್ಚೇಗೌಡ

►ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಸಂಸದ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ನಾಯಕ ಬಿ.ಎನ್ ಬಚ್ಚೇಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.


ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ನನಗೆ ಪಕ್ಷದಲ್ಲಿ ಟಿಕೆಟ್ ಕೋಡೋದಿಲ್ಲ ಎಂದು ಹೇಳಿಬಿಟ್ಟಿದ್ದಾರೆ. ಟಿಕೆಟ್ ಕೊಡೋದಿಲ್ಲ ಅಂತ ಸೀರಿಯಸ್ಸಾಗಿ ಹೇಳಿಬಿಟ್ಟಿದ್ದಾರೆ. ಒನ್ ಫ್ಯಾಮಿಲಿ ಒನ್ ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ತಂದೆ, ಮಗ, ಮಗಳು, ಮೊಮ್ಮಗ ರಾಜಕಾರಣಕ್ಕೆ ಬರುವಂತಿಲ್ಲ ಎಂದಿದ್ದಾರೆ. ಹೀಗಾಗಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಐದು ಗ್ಯಾರೆಂಟಿಗಳನ್ನು ಚಾಕಚಕ್ಯತೆಯಿಂದ ಜಾರಿಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರಲ್ಲಿ ಇದನ್ನೆಲ್ಲ ಜಾರಿಗೆ ತರುವಂಥಹ ಬುದ್ಧಿವಂತಿಕೆ ಇದೆ. ಸಿದ್ದರಾಮಯ್ಯ ಬಹಳ ಸಾರಿ ಚುನಾಯಿತರಾಗಿ ಬಂದಿದ್ದಾರೆ. ಅವರಿಗೆ ಬಹಳ ವರ್ಷ ವಿತ್ತ ಸಚಿವರಾಗಿರುವ ಅನುಭವ ಇದೆ. ಐದು ಗ್ಯಾರಂಟಿಗಳನ್ನು ಸಿದ್ದರಾಮಯ್ಯ ಜಾರಿ ಮಾಡುತ್ತಾರೆ ಎಂದು ನಿವೃತ್ತಿಯ ಸಂದರ್ಭದಲ್ಲಿ ಬಚ್ಚೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದರು.

Join Whatsapp
Exit mobile version