ಉತ್ತರ ಪ್ರದೇಶ ಪಂಚಾಯತ್ ಚುನಾವಣೆಯಲ್ಲಿ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ!

Prasthutha|

►ಮುಖ್ಯಮಂತ್ರಿ ಆದಿತ್ಯನಾಥ್ ಗೆ ಮುಖಭಂಗ

- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ತೀವ್ರ ಮುಖಂಭಂಗವಾಗಿದೆ.
ಪ್ರಧಾನಿ ಮೋದಿ ಕ್ಷೇತ್ರ ವಾರಣಾಸಿ ಮತ್ತು ಅಯೋಧ್ಯೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದೆ. ಮಥುರಾದಲ್ಲಿ ಮಾಯಾವತಿಯ ಅವರ ಬಿಎಸ್ ಪಿ ಮತ್ತು ಅಜಿತ್ ಸಿಂಗ್ ಅವರ ಆರ್ ಎಲ್ ಡಿ ಜಯಗಳಿಸಿದೆ. ಈ ಮೂರು ಜಿಲ್ಲೆಗಳು ಬಿಜೆಪಿಯ ಭದ್ರಕೋಟೆಯಾಗಿತ್ತು.


ಯೋಗಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಈ ಮೂರು ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಿತ್ತು. ಈ ಬಾರಿಯ ಪಂಚಾಯತ್ ಚುನಾವಣೆಯ ಫಲಿತಾಂಶದಲ್ಲಿ ರಾಜ್ಯದ ಬಿಜೆಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
ವಾರಣಾಸಿಯಲ್ಲಿ ಪರಿಷತ್ ಚುನಾವಣೆಯ ಬಳಿಕ ಇದೀಗ ಬಿಜೆಪಿ ಪಂಚಾಯತ್ ಚುನಾವಣೆಯಲ್ಲೂ ಸೋಲನುಭವಿಸಿದೆ. ಪ್ರಧಾನಿಯವರ ಕ್ಷೇತ್ರವಾಗಿರುವ ವಾರಣಾಸಿಯಲ್ಲಿ ಜಿಲ್ಲಾ ಪಂಚಾಯತ್ ನ 40 ಸ್ಥಾನಗಳ ಪೈಕಿ ಬಿಜೆಪಿ ಕೇವಲ 8 ಸ್ಥಾನಗಳನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ.

- Advertisement -


ಸಮಾಜವಾದಿ ಪಕ್ಷ 14 ಸ್ಥಾನಗಳನ್ನು ಗೆದ್ದಿದೆ, ಬಿಎಸ್ಪಿ 5 ಸ್ಥಾನಗಳು, ಅಪ್ನಾ ದಳ (ಎಸ್) ಮೂರು ಸ್ಥಾನಗಳನ್ನು ಗೆದ್ದಿವೆ. ಆಮ್ ಆದ್ಮಿ ಪಕ್ಷ ಕೂಡ ವಾರಣಾಸಿ ಜಿಲ್ಲೆಯಲ್ಲಿ ತನ್ನ ಖಾತೆಯನ್ನು ತೆರೆದಿದೆ.

Join Whatsapp