ಬೆಂಗಳೂರು: ಹಿಂದಿಗೆ ಹೆಚ್ಚು ಪ್ರಾಶಸ್ತ್ಯ ನೀಡಿ ಕನ್ನಡ ಕಡೆಗಣಿಸುತ್ತಿದ್ದ ಕೇಂದ್ರ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದೆ. ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮಗಳು ಕನ್ನಡಮಯವಾಗಿವೆ.
ಮೋದಿ ಶಿಲನ್ಯಾಸ ಮಾಡಿದ ಫಲಕಗಳಲ್ಲಿ, ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡ ರಾರಾಜಿಸಿತು. ಈ ಹಿಂದೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸಿ ಹಿಂದಿಗೆ ಪ್ರಾಶಸ್ತ್ಯ ನೀಡಲಾಗುತ್ತಿತ್ತು.
ಕೇಂದ್ರ ಸರ್ಕಾರದ ಕನ್ನಡ ವಿರೋಧಿ ನೀತಿಗೆ ಕನ್ನಡಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಕನ್ನಡಪರ ಸಂಘಟನೆಯ ಕಾರ್ಯಕರ್ತರು ಹಿಂದಿ ಫಲಕಗಳಿಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳಲ್ಲಿ ಕನ್ನಡಕ್ಕೆ ಹೆಚ್ಚು ಒತ್ತು ಕೊಟ್ಟಿದೆ.