ಮೂಡುಬಿದಿರೆ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಹಲವು ಮಂದಿ ಗಂಭೀರ

Prasthutha|

ಮೂಡುಬಿದಿರೆ: ಇಲ್ಲಿ‌ನ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

- Advertisement -

ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ.

- Advertisement -

ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Join Whatsapp
Exit mobile version