Home ಟಾಪ್ ಸುದ್ದಿಗಳು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅಧಿಕಾರ ಸ್ವೀಕಾರ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆ ಬಳಿಯ ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ ನೂತನ ಕಾಂಗ್ರೆಸ್ ಕಟ್ಟಡದಲ್ಲಿ ಅಧಿಕಾರ ಸ್ವೀಕರಿಸಿದರು.

 ಈ ಹಿಂದೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. 

ಇದಾದ ಬಳಿಕ ಕಾಂಗ್ರೆಸ್ ಹಿರಿಯ ಮುಖಂಡರು ಸಂಧಾನ ನಡೆಸಿ, ರಕ್ಷಾ ರಾಮಯ್ಯ ಅವರ ಅಧಿಕಾರ ಅವಧಿ ಮುಗಿದ ಬಳಿಕ ಮೊಹಮ್ಮದ್ ನಲಪಾಡ್ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ಮೊಹಮ್ಮದ್ ನಲಪಾಡ್ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಂಡರು.

Join Whatsapp
Exit mobile version