Home ಟಾಪ್ ಸುದ್ದಿಗಳು ಮುಹಮ್ಮದ್ ಜುಬೈರ್ ರನ್ನು ಪಾಟಿಯಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು

ಮುಹಮ್ಮದ್ ಜುಬೈರ್ ರನ್ನು ಪಾಟಿಯಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು

ನವದೆಹಲಿ: ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಜುಬೈರ್ ಅವರನ್ನು ಇಂದು ದೆಹಲಿಯ ಪಟಿಯಾಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ದ್ವಾರಕಾದ ದೆಹಲಿ ಪೊಲೀಸ್ ವಿಶೇಷ ಘಟಕದ ಇಂಟೆಲಿಜೆನ್ಸ್ ಫ್ಯೂಷನ್ ಆ್ಯಂಡ್ ಸ್ಟ್ರಾಟೆಜಿಕ್ ಆಪರೇಶನ್ಸ್ (ಐಎಫ್ ಎಸ್ ಒ) ಘಟಕದ ಅಧಿಕಾರಿಗಳು ಜುಬೈರ್ ಅವರನ್ನು ಇಂದು ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪಟಿಯಾಲ ಹೌಸ್ ನ್ಯಾಯಾಲಯವು ದೆಹಲಿ ಪೊಲೀಸ್ ವಿಶೇಷ ಘಟಕಕ್ಕೆ ನೀಡಿದ ಪೊಲೀಸ್ ರಿಮಾಂಡ್ ಅನ್ನು ಪ್ರಶ್ನಿಸಿ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಮಧ್ಯೆ  ವಿಚಾರಣಾ ನ್ಯಾಯಾಲಯವು ನೀಡಿದ ಪೊಲೀಸ್ ಕಸ್ಟಡಿ ರಿಮಾಂಡ್ ಅನ್ನು ಪ್ರಶ್ನಿಸಿ ಜುಬೈರ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ದೆಹಲಿ ಹೈಕೋರ್ಟ್ ಶುಕ್ರವಾರ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಆಕ್ಷೇಪಾರ್ಹ ಟ್ವೀಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರನ್ನು ಜೂನ್ 28 ರಂದು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ರಜಾಕಾಲದ ನ್ಯಾಯಪೀಠವು ಈ ಅರ್ಜಿಯ ಬಗ್ಗೆ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿತು ಮತ್ತು ಎರಡು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ಮತ್ತು ಒಂದು ವಾರದಲ್ಲಿ ಅದಕ್ಕೆ ಪ್ರತ್ಯುತ್ತರವನ್ನು ಸಲ್ಲಿಸುವಂತೆ ನಿರ್ದೇಶಿಸಿತು. ಮುಂದಿನ ವಿಚಾರಣೆಗಾಗಿ ಈ ವಿಷಯವನ್ನು ಜುಲೈ 27ಕ್ಕೆ ಪಟ್ಟಿ ಮಾಡಲಾಗಿದೆ.

Join Whatsapp
Exit mobile version