ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು: ಡಿಕೆ ಶಿವಕುಮಾರ್

Prasthutha|

- Advertisement -

ಬೆಂಗಳೂರು: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರ ಆರು ವಿಕೆಟ್ ಗಳ ನೆರವಿನಿಂದ ಭರ್ಜರಿ ಜಯಭೇರಿ ಬಾರಿಸಿತು.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಡಿಕೆಶಿ, ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು ಎಂದು ಕರೆದಿದ್ದಾರೆ. ಸಿರಾಜ್ ಅವರ ಬೌಲಿಂಗ್ ದಾಳಿ ಕಂಡು ಬೆರಗಾದೆ. ಟೀಂ ಇಂಡಿಯಾ ಕಲಿಗಳ‌ ಗೆಲುವಿನ ನಾಗಾಲೋಟ ಹೀಗೇ ಮುಂದುವರಿಯಲಿ. ಜೈಹೋ ಟೀಂ ಇಂಡಿಯಾ! ಎಂದು ಶುಭ ಹಾರೈಸಿದ್ದಾರೆ.