ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಿವೃತ್ತ ಶಿಕ್ಷಕ ಮುಹಮ್ಮದ್ ತುಂಬೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ಮುಹಮ್ಮದ್ ತುಂಬೆ, ಪದವೀಧರ ಕ್ಷೇತ್ರದ ಮತದಾನದ ಪ್ರಕ್ರಿಯೆ ಪದವೀಧರಿಗೆ ತಲುಪದಂತಹ ಪರಿಸ್ಥಿತಿಯನ್ನು ನಾವು ಕಾಣುತ್ತಿದ್ದೇವೆ. ಪದವೀಧರ ಕ್ಷೇತ್ರದ ಮಹತ್ವವನ್ನು ಪದವೀಧರಿಗೆ ತಿಳಿಸುವ ಕೆಲಸ ಮಾಡಬೇಕು. ಈ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಪದವೀಧರಿಗೆ ಉನ್ನತ ಶಿಕ್ಷಣಕ್ಕಾಗಿ ಸಹಾಯ ಮಾಡಲು ಯೋಜನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ನಾನು ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅನೇಕ ಸಂಘಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದನೆ ನೀಡಿದ್ದೇನೆ. ಪ್ರಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಬಂಟ್ವಾಳ ತಾಲೂಕು ಸರಕಾರಿ ನೌಕಕರ ಸಂಘದ ಕಾರ್ಯದರ್ಶಿಯಾಗಿ ಸೇವೆ ಮಾಡಿದ್ದೇನೆ.ಸರ್ಕಾರಿ ಪ್ರೌಢ ಶಾಲಾ ಭಡ್ತಿ ಹೊಂದಿದ ಶಿಕ್ಷಕ ಸಂಘದ ಸ್ಥಾಪಕಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದ್ದಾರೆ.
ಮುಹಮ್ಮದ್ ತುಂಬೆ ಅವರು 40 ವರ್ಷಗಳ ಕಾಲ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದು, ದ.ಕ. ಸ್ಕೌಟ್-ಗೈಡ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.