ನವದೆಹಲಿ: ಮಲಯಾಳಂ ಸಿನಿಮಾ ಕಲಾವಿದರ ಸಂಘದ (AMMA) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟ ಮೋಹನ್ಲಾಲ್ ಅವರು ರಾಜಿನಾಮೆ ನೀಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳ ಬಗೆ ನ್ಯಾಯಮೂರ್ತಿ ಹೇಮಾ ಸಮಿತಿಯು ವರದಿ ಸಲ್ಲಿಕೆ ಮಾಡಿದ ಬಳಿಕ ದೊಡ್ಡ ಚರ್ಚೆ ಶುರುವಾಗಿದೆ.
ಮೋಹನ್ ಲಾಲ್ ಮಾತ್ರವಲ್ಲದೇ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಸಾಮೂಹಿಕವಾಗಿ ರಾಜಿನಾಮೆ ನೀಡಿದ್ದಾರೆ ಎಂದು ವರದಿ ಆಗಿದೆ.
ಮಾಲಿವುಡ್ನ ಪ್ರಭಾವಿಗಳ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸ್ಥಾನಗಳಿಗೆ ರಾಜಿನಾಮೆ ನೀಡಲಾಗುತ್ತಿದೆ.
Collective resignation in 'Amma'.
— Friday Matinee (@VRFridayMatinee) August 27, 2024
All office bearers including Mohanlal resigned and the governing body was dissolved. pic.twitter.com/bntbb1FCOx
ಮಲಯಾಳಂ ಚಿತ್ರರಂಗದಲ್ಲಿ ಈ ಹಿಂದೆ ನಟಿಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಳಿಕ ಹೇಮಾ ಸಮಿತಿ ರಚನೆ ಆಗಿತ್ತು. ಇತ್ತೀಚೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಈ ಸಮಿತಿಯು ವರದಿ ಸಲ್ಲಿಸಿದೆ. ಆ ವರದಿಯಲ್ಲಿ ಶಾಕಿಂಗ್ ಸಂಗತಿಗಳು ಬಯಲಾಗಿವೆ. ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್, ಲೈಂಗಿಕ ಕಿರುಕುಳ ಹೇರಳವಾಗಿದೆ ಎಂಬುದು ಹೇಮಾ ಸಮಿತಿಯ ವರದಿಯಿಂದ ಬಹಿರಂಗವಾಗಿದೆ.