ಹೈದರಾಬಾದ್: ಹೈದಾರಾಬಾದಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಳಿ ವೇಳೆ ಸಿಕ್ಕಿರುವ ಹಣ ನೋಡಿ ಅಧಿಕಾರಿಗಳು ಶಾಕ್ ಆಗಿದ್ದಾರೆ.
ಮೂಲಗಳ ಪ್ರಕಾರ ಲೆಕ್ಕವಿಲ್ಲದ 550 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಹೈದರಾಬಾದ್ ಮೂಲದ ಫಾರ್ಮಾ ಕಂಪನಿಗೆ ಸೇರಿದ 142.87 ಕೋಟಿ ರೂ. ವಶಕ್ಕೆ ಪಡೆದಿದ್ದು ಪೋಟೋಗಳನ್ನು ಕಂಡವರು ನಾನಾ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ವಿದೇಶಗಳಲ್ಲಿಯೂ ಈ ಕಂಪನಿ ತನ್ನ ಶಾಖೆ ಹೊಂದಿದೆ ಎಂಬ ಮಾಹಿತಿ ಇದೆ ಎಂದು ತಿಳಿದು ಬಂದಿದೆ.
ಆದರೆ ಎಲ್ಲರ ಗಮನವನ್ನು ಸೆಳೆದಿರುವುದು ಕಪಾಟಿನ ತುಂಬಾ ತುಂಬಿರುವ ನೋಟಿನ ಕಂತೆಗಳು ಈಗ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿದೆ.