ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

Prasthutha|

- Advertisement -

ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ ಅಜ್ಜಿ ಹೋಳಿಗೆ ಊಟ ಹಾಕಿಸಿದ್ದಾರೆ. ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆಯಿಂದ ಊರಿಗೆಲ್ಲಾ ಊಟ ಹಾಕಿಸಿದ್ದಾರೆ.

- Advertisement -

ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2,000 ಹಣ ನೀಡುತ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದೇನೆ ಎಂದು ಅಜ್ಜಿ ಹೇಳಿದ್ದಾರೆ.



Join Whatsapp