Home Uncategorized ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ ಅಜ್ಜಿ ಹೋಳಿಗೆ ಊಟ ಹಾಕಿಸಿದ್ದಾರೆ. ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆಯಿಂದ ಊರಿಗೆಲ್ಲಾ ಊಟ ಹಾಕಿಸಿದ್ದಾರೆ.

ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2,000 ಹಣ ನೀಡುತ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದೇನೆ ಎಂದು ಅಜ್ಜಿ ಹೇಳಿದ್ದಾರೆ.

Join Whatsapp
Exit mobile version