ಮತದಾರರಿಗೆ ಹಂಚಲು ಇಟ್ಟಿದ್ದ 50 ಲಕ್ಷ ರೂ. ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

Prasthutha|

ಮೈಸೂರು: ಕರ್ನಾಟಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ಇಟ್ಟಿದ್ದ ಐವತ್ತು ಲಕ್ಷ ರೂ. ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.

- Advertisement -

ಜಿಲ್ಲೆಯ ಹೆಚ್​ಡಿ ಕೋಟೆ ತಾಲೂಕಿನ ದೇವಲಾಪುರ ಕಾಲೋನಿ ತೋಟದ ಮನೆಯೊಂದರಲ್ಲಿ ಚುನಾವಣಾಧಿಕಾರಿಗಳು ಶೋಧ ನಡೆಸಿದಾಗ 50 ಲಕ್ಷ ರೂಪಾಯಿ ಪತ್ತೆಯಾಗಿದೆ.

ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಚುನಾವಣಾಧಿಕಾರಿಗಳು ಶೋಧ ನಡೆಸಿದಾಗ ಮನೆಯೊಳಗೆ ಬ್ಯಾಗ್ ಪತ್ತೆಯಾಗಿದ್ದು, ಇದರಲ್ಲಿ ಕಂತೆಕಂತೆ ನೋಟುಗಳು ಪತ್ತೆಯಾಗಿವೆ.