Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ ಮುಂದೂಡಿಕೆ

ಅಕ್ರಮ ಹಣ ವರ್ಗಾವಣೆ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ ಮುಂದೂಡಿಕೆ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಪಾಟಿಯಾಲ ನ್ಯಾಯಾಲಯ ಮುಂದೂಡಿದೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಸುಕೇಶ್ ಚಂದ್ರಶೇಖರ್ ಜೊತೆಗಿನ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಂದು ಪಾಟಿಯಾಲ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುತ್ತಿದ್ದು, ವಿಚಾರಣೆಗಾಗಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ನ್ಯಾಯಾಲಯವು ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ನಟಿ ಜಾಕ್ವೆಲಿನ್ ಅವರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೆಂದರ್ ಅವರು 2 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿಯ ಆಧಾರದಲ್ಲಿ ಜಾಮೀನು ಮಂಜೂರು ಮಾಡಿದ್ದರು.

Join Whatsapp
Exit mobile version