ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡೀಸ್’ಗೆ ಜಾಮೀನು

Prasthutha|

ನವದೆಹಲಿ: ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಡೀಸ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

- Advertisement -

ಈ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರ ಏಕಸದಸ್ಯ ಪೀಠ, 50 ಸಾವಿರ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಮೇಲೆ ಜಾಕ್ವೆಲಿನ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

ಆಗಸ್ಟ್ 31ರಂದು ಜಾರಿ ನಿರ್ದೇಶನಾಲಯ ಸಲ್ಲಿಸಿದ ಚಾರ್ಜ್ ಶೀಟ್ ಅನ್ನು ಪರಿಗಣಿಸಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಧೀಶರು ಜಾಕ್ವೆಲಿನ್ ಅವರಿಗೆ ಸೂಚಿಸಿದ್ದರು.

Join Whatsapp