ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

Prasthutha|

ಬೆಂಗಳೂರು: ತನ್ನ ವಿರುದ್ಧ ದಾಖಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿದೆ.

- Advertisement -

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರವಾಗಿ ಅಕ್ಟೋಬರ್ 7ರಂದು ದೆಹಲಿಯ ಇಡಿ ಕಚೇರಿಯ ಎದುರು ತನಿಖೆಗೆ ಬರುವುದರಿಂದ ವಿನಾಯಿತಿ ಕೋರಿ ಡಿಕೆ ಶಿವಕುಮಾರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಡಿಕೆ ಶಿವಕುಮಾರ್ ಅವರ ಮನವಿಯನ್ನು ವಜಾಗೊಳಿಸಿತ್ತು. ಇದರಿಂದಾಗಿ ಅವರು ಕಳೆದ ತಿಂಗಳು ವಿಚಾರಣೆಯನ್ನು ಎದುರಿಸಿದ್ದರು.

ಕಾಂಗ್ರೆಸ್ ಅಧೀನದಲ್ಲಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕುರಿತ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದಂತೆ ನಡೆದ ಅಕ್ರಮದ ಬಗ್ಗೆ ತನಿಖೆಯ ಭಾಗವಾಗಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು.

- Advertisement -

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್’ನ ಇತರ ನಾಯಕರಾದ ಮಲ್ಲಿಕಾರ್ಜಿನ ಖರ್ಗೆ, ಪವನ್ ಬನ್ಸಾಲ್ ಅವರನ್ನು ಇಡಿ ವಿಚಾರಣೆ ನಡೆಸುತ್ತಿದೆ.

Join Whatsapp