Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ನವ್ಯಾ ನಾಯರ್ ವಿರುದ್ಧ ದೂರು ದಾಖಲು

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ನವ್ಯಾ ನಾಯರ್ ವಿರುದ್ಧ ದೂರು ದಾಖಲು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನವ್ಯಾ ನಾಯರ್ ವಿರುದ್ಧ ಇಡಿ (ಜಾರಿ ನಿರ್ದೇಶನಾಲಯ) ದೂರು ದಾಖಲಿಸಿದೆ.


ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಅಧಿಕಾರಿಯೊಬ್ಬರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ನಟಿ ನವ್ಯಾ ನಾಯರ್, ಆ ಅಧಿಕಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಉಡುಗೊರೆಗಳನ್ನು, ಹಣವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಐಆರ್ ಎಸ್ ಅಧಿಕಾರಿ ಸಚಿನ್ ಸಾವಂತ್ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದಾರೆ. ಈ ಅಧಿಕಾರಿಯಿಂದ ನಟಿ ನವ್ಯಾ ನಾಯರ್ ಚಿನ್ನದ ಆಭರಣಗಳು ಸೇರಿದಂತೆ ಹಲವು ದುಬಾರಿ ಉಡುಗೊರೆಗಳು, ನಗದು ಹಣವನ್ನು ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಇದೇ ಕಾರಣಕ್ಕೆ ನಟಿ ನವ್ಯಾ ವಿರುದ್ಧವೂ ದೂರು ದಾಖಲಿಸಲಾಗಿದೆ.

Join Whatsapp
Exit mobile version