Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ಕೋರಿ ಅನಿಲ್ ದೇಶ್ ಮುಖ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ಕೋರಿ ಅನಿಲ್ ದೇಶ್ ಮುಖ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಂದ ಬಂಧಿತರಾಗಿರುವ ಮಾಜಿ ಗೃಹ ಸಚಿವ ದೇಶ್ ಮುಖ್ ಸಲ್ಲಿಸಿರುವ ಡೀಫಾಲ್ಟ್ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ ದೇಶ್ ಮುಖ್ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜನವರಿ ನಾಲ್ಕರಂದು ಜಾಮೀನು ನೀಡುವಂತೆ ಕೋರಿ PMLA ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ನ್ಯಾಯಾಲಯ ದೇಶ್ ಮುಖ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

Join Whatsapp
Exit mobile version