ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮುಖ್ಯಮಂತ್ರಿಗೆ ಇಡಿ ಸಮನ್ಸ್

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ.

- Advertisement -


ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂ ಸೋರೆನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.


ಇದಕ್ಕೂ ಮೊದಲು ಆಗಸ್ಟ್ 14 ರಂದು, ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ, ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ತಯಾರಿಯಲ್ಲಿ ನಿರತರಾಗಿದ್ದರಿಂದ ಸೋರೆನ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

Join Whatsapp