ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ಆರೋಪಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಉಲ್ಲೇಖಿಸಿದೆ.
ಹರಿಯಾಣದ ಫರಿದಾಬಾದ್ ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವೂ ಇದೆ ಎಂದು ಆರೋಪಿಸಲಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಶಾಕ್ ನೀಡಿದ್ದ, ಜಾರಿ ನಿರ್ದೇಶನಾಲಯ (ಇಡಿ) ಭೂಮಿ ಖರೀದಿ -ಮಾರಾಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸಂಕಷ್ಟ ತಂದೊಡ್ಡಿದೆ.