ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವುತ್ ಗೆ ಜಾಮೀನು

Prasthutha|

ಮುಂಬೈ: ಪತ್ರಾ ಚಾಲ್ ಭೂ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಸೇನೆ ಸಂಸದ ಸಂಜಯ್ ರಾವುತ್ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

- Advertisement -

ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ಅಧ್ಯಕ್ಷತೆ ವಹಿಸಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು ಜಾಮೀನು ಆದೇಶವನ್ನು ನವೆಂಬರ್ 9 ರವರೆಗೆ ಕಾಯ್ದಿರಿಸಿದ್ದರು.

ರಾವತ್ ಅವರ ಸಹಚರ ಮತ್ತು ಪ್ರಮುಖ ಆರೋಪಿ ಪ್ರವೀಣ್ ರಾವತ್ ಅವರಿಗೂ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

- Advertisement -

ರಾವುತ್ ಪ್ರಸ್ತುತ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.

ಮುಂಬೈನ ಉಪನಗರ ಗೋರೆಗಾಂವ್ ನ ರೂ.1,034 ಕೋಟಿ ಪತ್ರಾ ಚಾಲ್ ಭೂ ಅಭಿವೃದ್ಧಿಯಲ್ಲಿ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ರಾವತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

Join Whatsapp