ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಗೆ 14 ದಿನಗಳ ನ್ಯಾಯಾಂಗ ಬಂಧನ

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮತ್ತು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

- Advertisement -

ಕಳೆದ ತಿಂಗಳು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರನ್ನು ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್‌ ಅವರ ನಿವಾಸ ಮತ್ತು ಸಂಬಂಧಿತ ಇತರ ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿತ್ತು. ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ₹2.85 ಕೋಟಿ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆಯಲಾಗಿದೆ.



Join Whatsapp