Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಗೆ 14 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮತ್ತು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಕಳೆದ ತಿಂಗಳು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರನ್ನು ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್‌ ಅವರ ನಿವಾಸ ಮತ್ತು ಸಂಬಂಧಿತ ಇತರ ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿತ್ತು. ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ₹2.85 ಕೋಟಿ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆಯಲಾಗಿದೆ.

Join Whatsapp
Exit mobile version