Home ಟಾಪ್ ಸುದ್ದಿಗಳು ಮನಿ ಲಾಂಡರಿಂಗ್ : ಮಹಾರಾಷ್ಟ್ರದ ಸಾರಿಗೆ ಸಚಿವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ED ದಾಳಿ

ಮನಿ ಲಾಂಡರಿಂಗ್ : ಮಹಾರಾಷ್ಟ್ರದ ಸಾರಿಗೆ ಸಚಿವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ED ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಬೆಳಗ್ಗೆ ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.

ತನಿಖಾ ಸಂಸ್ಥೆಯು ಅನಿಲ್ ಪರಬ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ ಎ) ಕ್ರಿಮಿನಲ್ ಸೆಕ್ಷನ್ ಗಳ ಅಡಿಯಲ್ಲಿ ಹೊಸ ಪ್ರಕರಣ ದಾಖಲಿಸಿದ ನಂತರ ಪುಣೆ, ಮುಂಬೈ ಮತ್ತು ದಾಪೋಲಿಯಲ್ಲಿರುವ ಪರಬ್ ಅವರ ನಿವಾಸ ಸೇರಿದಂತೆ ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಮಾಜಿ ಸಚಿವ ಅನಿಲ್ ದೇಶ್ ಮುಖ್ ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಪರಬ್ ಅವರನ್ನು ಈ ಹಿಂದೆ ಇಡಿ ಪ್ರಶ್ನಿಸಿತ್ತು.

Join Whatsapp
Exit mobile version