ಅಕ್ರಮ ಹಣ ವರ್ಗಾವಣೆ: ಮಾಜಿ ಸಚಿವ ನವಾಬ್ ಮಲಿಕ್’ಗೆ ಜಾಮೀನು ನಿರಾಕರಣೆ

Prasthutha|

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್’ಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ನಿರಾಕರಿಸಿದೆ.

ವಿಶೇಷ ನ್ಯಾಯಾಧೀಶ ಆರ್.ಎನ್. ರೋಕಡೆ ಅವರು ಮಲಿಕ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ಈ ಪ್ರಕರಣದ ಆದೇಶವನ್ನು ನವೆಂಬರ್ 14ರಂದು ಕಾಯ್ದಿರಿಸಿತ್ತು.

- Advertisement -

ಇಡಿ ಅಧಿಕಾರಿಗಳು ಫೆಬ್ರವರಿಯಲ್ಲಿ ಎನ್.ಸಿ.ಪಿ. ಮುಖಂಡ ನವಾಬ್ ಮಲಿಕ್ ಅವರನ್ನು UAPA ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು.

ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -