ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ತಪಾಸಣೆಗೆ ಒಳಪಡಿಸಿದ ಏಳು ಜನರ ಪೈಕಿ 55 ವರ್ಷದ ಮಹಿಳೆಗೆ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಒಂಬತ್ತು ಮಂಗನ ಕಾಯಿಲೆ ಪ್ರಕರಣಗಳ ಪೈಕಿ ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ, ನಾಲ್ಕು ಸಕ್ರಿಯ ಪ್ರಕರಣಗಳಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.