Home ಟಾಪ್ ಸುದ್ದಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ: 10 ದಿನಗಳಲ್ಲಿ 21 ಜನರಿಗೆ ಸೋಂಕು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ: 10 ದಿನಗಳಲ್ಲಿ 21 ಜನರಿಗೆ ಸೋಂಕು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದ್ದು, ಕಳೆದ 10 ದಿನಗಳಲ್ಲಿ 21 ಜನರಿಗೆ ಸೋಂಕು ತಗುಲಿದೆ.

ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಕಂಡು ಬರುತ್ತಿದೆ. ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ ಆತಂಕವೂ ಜನರಲ್ಲಿ ಮನೆ ಮಾಡಿದೆ.

ಸಿದ್ದಾಪುರದಲ್ಲಿ ಕಳೆದ 15 ದಿನದ ಹಿಂದೆ ಮಂಗ ಒಂದು ಸಾವನಪ್ಪಿತ್ತು. ಅದರ ಉಣ್ಣೆಯಿಂದ ಸಿದ್ದಾಪುರದಲ್ಲಿ ಮಂಗನ ಕಾಯಿಲೆ ಪತ್ತೆ ಆಗಿದೆ ಎನ್ನಲಾಗಿದೆ.

Join Whatsapp
Exit mobile version