Home ಟಾಪ್ ಸುದ್ದಿಗಳು ಮಂಕಿಪಾಕ್ಸ್ ಅಪ್ಡೇಟ್ಸ್ | ಕೇರಳದಲ್ಲಿ 5 ಪ್ರಕರಣ

ಮಂಕಿಪಾಕ್ಸ್ ಅಪ್ಡೇಟ್ಸ್ | ಕೇರಳದಲ್ಲಿ 5 ಪ್ರಕರಣ

ಭಾರತದಲ್ಲಿ ಒಟ್ಟು ಶಂಕಿತರ ಸಂಖ್ಯೆ 7ಕ್ಕೆ ಏರಿಕೆ

ನವದೆಹಲಿ: ಕೇರಳದಲ್ಲಿ ಮಂಗನ ಕಾಯಿಲೆಯ ಲಕ್ಷಣವನ್ನು ಹೊಂದಿರುವ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಕೆಲವು ದಿನಗಳ ಬಳಿಕ ಯುಎಇಯಿಂದ ಹಿಂದಿರುಗಿದ ವ್ಯಕ್ತಿಯೊಬ್ಬರಿಗೆ ಇಂದು ಮಂಕಿಫಾಕ್ಸ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದ್ದು, ಕೇರಳದಲ್ಲಿ ಮತ್ತೊಂದು ಪ್ರಕರಣ ದೃಢಪಟ್ಟಿದೆ. ಇದು ರಾಜ್ಯದ ಐದನೇ ಮತ್ತು ಭಾರತದ 7ನೇ ಪ್ರಕರಣ ಎಂದು ಹೇಳಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ರಾಜ್ಯದಲ್ಲಿ ಮತ್ತೊಂದು ಮಂಕಿಫಾಕ್ಸ್ ಪ್ರಕರಣದ ಸುದ್ದಿಯನ್ನು ಖಚಿತಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಯುಎಇಯಿಂದ ಜುಲೈ 27 ರಂದು ಕ್ಯಾಲಿಕಟ್ ವಿಮಾನ ನಿಲ್ದಾಣವನ್ನು ತಲುಪಿದ್ದ 30 ವರ್ಷದ ವ್ಯಕ್ತಿ ಮಲಪ್ಪುರಂನ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದು ರಾಜ್ಯದಲ್ಲಿ ಪತ್ತೆಯಾದ ಐದನೇ ಮಂಗನ ಕಾಯಿಲೆಯಾಗಿದೆ. ಮಂಕಿಪಾಕ್ಸ್ ನ ರೋಗಲಕ್ಷಣಗಳೊಂದಿಗೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ ಬಳಿಕ ತ್ರಿಶೂರ್ ಜಿಲ್ಲೆಯಲ್ಲಿ ಇಪ್ಪತ್ತು ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version