UAE ಯಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಪತ್ತೆ: ಕೇರಳದಲ್ಲಿ ಮೃತ್ಯು !

Prasthutha|

ತ್ರಿಶೂರು: ಕೊಲ್ಲಿ ರಾಷ್ಟ್ರ UAE ಯಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳ ಪತ್ತೆಯಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ.

- Advertisement -

ಚಾವಕ್ಕಾಡ ನಿವಾಸಿ 26 ವರ್ಷದ ವ್ಯಕ್ತಿಯೊಬ್ಬರು ಜುಲೈ 26 ರಂದು UAE ಯಿಂದ ಬಂದಿದ್ದರು. ಅವರು ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಮೂರ್ಛೆ ಹೋದ ಕಾರಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಮೈ ಮೇಲಿನ ಚರ್ಮದಲ್ಲಿ ದುದ್ದುಗಳಿದ್ದರೂ, ಮಂಕಿಪಾಕ್ಸ್ ರೋಗ ಪ್ರಮುಖ ಲಕ್ಷಣಗಳಲ್ಲಿ ಒಂದಾದ ದುಗ್ದರಸ ಗ್ರಂಥಿಗಳಲ್ಲಿ ಊತ ಕಾಣಿಸಿಕೊಂಡಿತ್ತು.

- Advertisement -

ಸದ್ಯ ಅವರ ಆರೋಗ್ಯ ಸಮಸ್ಯೆ ಹದಗೆಡುತ್ತಿದ್ದಂತೆ ಮೆದುಳು ನಿಷ್ಕ್ರಿಯಗೊಂಡಿದ್ದು, ಈ ವ್ಯಕ್ತಿಯು ಮಂಕಿಪಾಕ್ಸ್’ನಿಂದ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ದೃಢಪಡಿಸಿವೆ. ಇದು ಕೇರಳದಲ್ಲಿ ಮಂಕಿಪಾಕ್ಸ್’ಗೆ ಮೊದಲ ಬಲಿ ಎಂದು ಹೇಳಲಾಗಿದೆ.

ಆರೋಗ್ಯ ಅಧಿಕಾರಿಗಳು ಈಗಾಗಲೇ ವ್ಯಕ್ತಿಯ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆಹಚ್ಚಿದ್ದು, ಆರೋಗ್ಯ ಸಂಬಂಧ ನಿಯಮವನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಪ್ರಾರಂಭಿಸಿದ್ದಾರೆ.

ಈ ಮಧ್ಯೆ ಭಾರತದ ಮೊದಲ ಮಂಕಿಪಾಕ್ಸ್ ರೋಗಿಯಾಗಿದ್ದುಕೊಂಡು, ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಯಲ್ಲಿದ್ದ ಕೇರಳ ಮೂಲದ ಇನ್ನೊಬ್ಬ ವ್ಯಕ್ತಿ ಈ ಕಾಯಿಲೆಯಿಂದ ಸಂಪೂರ್ಣವಾಗಿ ಗುಣಮುಖವಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

Join Whatsapp