ಕೇರಳಕ್ಕೆ ಮುಂಗಾರು ಆಗಮನ: ಮಳೆ ಆರಂಭ

Prasthutha|

ತಿರುವನಂತಪುರ: ಗುರುವಾರ ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

- Advertisement -


ಪ್ರತಿ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಕೇರಳಕ್ಕೆ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದೆ.


ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ವ್ಯಾಪಕ ಮಳೆಯಾಗಿದೆ. ಈ ಪರಿಸ್ಥಿತಿಗಳನ್ನು ಪರಿಗಣಿಸಿ, ನೈಋತ್ಯ ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದೆ ಎಂದು ಹೇಳಬಹುದು ಭಾರತೀಯ ಹವಾಮಾನ ಸಂಸ್ಥೆ ಹೇಳಿದೆ. ಕರ್ನಾಟಕವೂ ಸೇರದಂತೆ ಅನೇಕ ರಾಜ್ಯಗಳು ಮುಂಗಾರು ಎದುರಿಸಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗುರುವಾರ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅಲ್ಲದೇ, ಬೆಂಗಳೂರಿನ ಒಳಚರಂಡಿ ವ್ಯವಸ್ಥೆಯ ಪರಿಶೀಲನೆ ಮಾಡಿದ್ದಾರೆ.

- Advertisement -


ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.



Join Whatsapp