ಮುಂಗಾರು ಚುರುಕು: ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಕೆ

Prasthutha|


ಬೆಂಗಳೂರು, ಜು 14; ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಹಲವಡೆ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನಲ್ಲಿ ಹೆಚ್ಚಳ ಉಂಟಾಗಿದ್ದು, ಹಾರಂಗಿ ಜಲಾಶಯದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದೆ.

- Advertisement -


ಕೇರಳದಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಕಬಿನಿ ಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬುಗಾದಿ ಗೌತಮ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಐದು ದಿನ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ವಿಶೇಷವಾಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಾಗೃತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ.

Join Whatsapp