ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

Prasthutha|

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಕೇಂದ್ರ ಸರ್ಕಾರ ಭಾನುವಾರ ಸರ್ವಪಕ್ಷಗಳ ಸಭೆ ಕರೆದಿದ್ದು, ಮುಂಗಾರು ಅಧಿವೇಶನದ ವೇಳೆ ಸದನದಲ್ಲಿ ಹೆಚ್ಚಿನ ಸದಸ್ಯರು ಭಾಗವಹಿಸುವಂತೆ ಕಾರ್ಯತಂತ್ರ ರೂಪಿಸಲಾಗಿದೆ.

- Advertisement -

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಈ ಸಭೆ ಕರೆದಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಪೀಯೂಷ್ ಗೋಯಲ್, ಎಐಎಡಿಎಂಕೆ ಸಂಸದ ಎಂ ತಂಬಿದುರೈ, ವೈಎಸ್ಆರ್ ಸಿಪಿ ಸಂಸದ ವಿಜಯಸಾಯಿ ರೆಡ್ಡಿ, ಟಿಎಂಸಿ ಸಂಸದ ಸುದೀಪ್ ಬಂದೋಪಾಧ್ಯಾಯ್, ಅಪ್ನಾ ದಳ್ ಸಂಸದೆ ಅನುಪ್ರಿಯಾ ಪಟೇಲ್, ಕಾಂಗ್ರೆಸ್ ಸಂಸದರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್, ರಾಷ್ಟ್ರೀಯ ಲೋಕ ದಳ್ ಸಂಸದರಾದ ಜಯಂತ್ ಚೌಧರಿ ಮತ್ತು ಡಿಎಂಕೆ ಸಂಸದ ತಿರುಚಿ ಸಿವ ಮತ್ತು ಇತರರು ಭಾಗಿಯಾಗಿದ್ದಾರೆ.

ಈ ಸಭೆಗೂ ಪ್ರಧಾನಿ ನರೇಂದ್ರ ಮೋದಿ ಗೈರಾಗಿದ್ದು, ಇದನ್ನು ವಿಪಕ್ಷ ಕಾಂಗ್ರೆಸ್ ಪ್ರಶ್ನಿಸಿದೆ. ಸಂಸತ್​ನಲ್ಲಿ ನಡೆಯಲಿರುವ ಅಧಿವೇಶನ ಬಗ್ಗೆ ಚರ್ಚಿಸಲು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಇದಕ್ಕೆ ಪ್ರಧಾನಿಯವರು ಗೈರು ಹಾಜರಾಗಿದ್ದಾರೆ. ಇಂದು ಅಸಂಸದೀಯ ಅಲ್ಲವೇ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮುಖಾಂತರ ಪ್ರಶ್ನಿಸಿದ್ದಾರೆ.

Join Whatsapp