ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿ ಕೊಲೆ ಪ್ರಕರಣ: ಆರೋಪಿಯ ಬಂಧನ

Prasthutha|

ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಅವರ ಮೇಲೆ ಟಿಪ್ಪರ್ ಹರಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಕೋಟೆ ಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಬಂಧಿತ ಆರೋಪಿ.


ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಅವರಿಗೆ ಆರೀಸ್ ರಾಡ್ ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್ ಚಲಾಯಿಸಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.

- Advertisement -


ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.